ನಾಳೆ ರಾಜ್ಯಕ್ಕೆ ಭೇಟಿ ನೀಡಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಶುಕ್ರವಾರದಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾರ್ಚ್ 17 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಡ್ಡಾ ಅವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ರ‍್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮರುದಿನ ಅವರು ಮತ್ತೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ತುಮಕೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದರೊಂದಿಗೆ ಹಲವು ಸಭೆಗಳು ನಡೆಯಲಿವೆ. ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆ ತುಂಬಲು ಅವರನ್ನು ಸಹ ಭೇಟಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!