ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗೆ ಸಿಗದ ಅನುಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಲಾಗಿದೆ.

ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ . ಇತ್ತ ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ, ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಜೆ.ಪಿ ನಡ್ಡಾ(JP Nadda) ಅವರ ರೋಡ್​ ಶೋಗೆ ಅನುಮತಿ ನಿರಾಕರಿಸಿದ್ದಾರೆ.

ಇನ್ನುತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅನುಮತಿ ಪಡೆಯುವುದಾಗಿ ಜೆಪಿ ನಡ್ಡಾ ಹೇಳಿದ್ದಾರೆ. ಇದಕ್ಕೂ ಮುನ್ನ ತಮಿಳುನಾಡಿನ ಅರಿಯಲೂರಿನಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ನಡ್ಡಾ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ದೀರ್ಘ ಪ್ರಗತಿ ಸಾಧಿಸಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!