ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನನಗೆ ಯಾವುದೇ ತರದ ಲಕ್ಷಣಗಳಿಲ್ಲ. ಅರಾಮಾಗಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಸ್ವಯಂ ಐಸೋಲೇಷನ್ ಆಗಿರೋದಾಗಿ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವಂತ ವ್ಯಕ್ತಿಗಳು ಕೊರೋನಾ ಪರೀಕ್ಷೆಗೆ ಒಳಪಟ್ಟು, ಸ್ವಯಂ ಐಸೋಲೇಷನ್ ಆಗುವಂತೆ ಮನವಿ ಮಾಡಿದ್ದಾರೆ.