Friday, March 24, 2023

Latest Posts

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ: ವಿಜಯ ಸಂಕಲ್ಪ ಯಾತ್ರೆಗೆ ನೀಡಲಿದ್ದಾರೆ ಚಾಲನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ವಿಜಯ ಸಂಕಲ್ಪ ಯಾತ್ರೆಗೆ (Vijay Sankalpa Yatra) ಚಾಲನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನಾಳೆ (ಮಾರ್ಚ್​​ 1) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಲಿದ್ದಾರೆ. ಮಲೆಮಹದೇಶ್ವರ ದೇವಾಲಯದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಅವರು, ನಂತರ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 12.05ಕ್ಕೆ ಸೋಲಿಗ ಸಮುದಾಯದ ಜೊತೆ ನಡ್ಡಾ ಸಂವಾದ ನಡೆಸಲಿದ್ದಾರೆ. ನಂತರ ಸಾಲೂರು ಮಠಕ್ಕೆ ಭೇಟಿ ನೀಡಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹನೂರು ಪಟ್ಟಣದ ಗೌರೀಶಂಕರ ಕಲ್ಯಾಣ ‌ಮಂಟಪ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ. ಸಂಜೆ 4.25ಕ್ಕೆ ನಡ್ಡಾ ಅವರು ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!