ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಹುಮನಾಬಾದ್‌ಗೆ

ದಿಗಂತ ವರದಿ ಬೀದರ್:

ನಾಳೆ ಭಾರತೀಯ ಜನತಾ ಪಕ್ಷದ ರಾಷ್ಟೀಯ ಅದ್ಯಕ್ಷರಾದ ಜಗತ್ ಪ್ರಕಾಶ ನಡ್ಡಾ ಅವರು ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಹುಡಗಿ ತಿಳಿಸಿದ್ದಾರೆ.

ಜೆ.ಪಿ ನಡ್ಡಾ ಅವರು ಶುಕ್ರವಾರ ಸಂಜೆ 6 ಗಂಟೆಗೆ ಹುಮನಾಬಾದ್ ಪಟ್ಟಣದ ಥೇರ್ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರದ ಮಂತ್ರಿಗಳು, ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಎಮ್.ಎಲ್.ಸಿಗಳು, ಹಿರಿಯ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳುವರು. ಕಾರಣ ಬಿಜೆಪಿಯ ಪಕ್ಷದ ಎಲ್ಲ ಮುಖಂಡರು, ಮಂಡಲಗಳ ಅಧ್ಯಕ್ಷ-ಪದಾಧಿಕಾರಿಗಳು, ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!