ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಷದಲ್ಲಿ ಗುಂಪುಗಾರಿಕೆ ತಲೆದೋರಿದೆ ಎಂಬ ಅಂಶವನ್ನು ಒಪ್ಪಿಕೊಂಡಿರುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಪಕ್ಷಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ತುಂಬಾ ಇದೆ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಲ್ಲದ್, ಪಕ್ಷದಲ್ಲಿ ಬಣಗಳು ಹುಟ್ಟಿಕೊಂಡಿರುವುದು ನಿಜ, ಹಿರಿಯರು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆಗಳಲ್ಲಿ ನಿರತರಾಗಿರುವುದರಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕಡೆ ಗಮನ ಹರಿಸಲಾಗುತ್ತಿಲ್ಲ, ಇನ್ನೂ ಎರಡು ತಿಂಗಳುಗಳ ಕಾಲ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಬೆಲ್ಲದ್ ತಿಳಿಸಿದ್ದಾರೆ.