Tuesday, June 6, 2023

Latest Posts

ಜ-4-5ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಿಣಿ

ಹೊಸದಿಗಂತ ವರದಿ, ಶಿವಮೊಗ್ಗ:

ಜನವರಿ 04 ಮತ್ತು 05 ರಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿದೆ ಎಂದು ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಶೋಕ ಮೂರ್ತಿ ತಿಳಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನವರಿ 04ರ ಸಂಜೆ ಒಬಿಸಿ ಮೋರ್ಚಾ ಪದಾಧಿಕಾರಿಗಳ ಸಬೆ ನಡೆಯಲಿದೆ. 5 ರ ಬೆಳಿಗ್ಗೆ ಕಾರ್ಯಕಾರಿಣಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ರಾಜ್ಯ ಒಬಿಸಿ ಮೋರ್ಚಾ ಪ್ರಭಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲೆಯ ಶಾಸಕರು, ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಳ್ಳುವರು. ಸಭೆಗೆ 180 ಮಂದಿ ಅಪೇಕ್ಷಿತರಿದ್ದಾರೆ ಎಂದು ತಿಳಿಸಿದರು.
ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಜಿಲ್ಲಾಧ್ಯಕ್ಷ ಮಾಲತೇಶ್, ಪ್ರಮುಖರಾದ ಹಿರಣ್ಣಯ್ಯ, ಅಣ್ಣಪ್ಪ, ಪ್ರಭಾಕರ, ಕುಮಾರ್, ಡಾ.ತಾನಾಜಿ ಸುದ್ದಿಗೋಷ್ಟಿಯಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!