ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದ ಬಿಜೆಪಿ: ಇದು ‘ಮ್ಯಾಚ್‌‌ ಫಿಕ್ಸಿಂಗ್‌’ ಎಂದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆಗೂ ಮುನ್ನವೇ ಸೂರತ್‌ನಲ್ಲಿ (Surat Lok Sabha Seat) ಬಿಜೆಪಿ ಮೊದಲ ಗೆಲುವಿನ ಖಾತೆ ತೆರಿದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ‘ಮ್ಯಾಚ್‌‌ ಫಿಕ್ಸಿಂಗ್‌’ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಬಗ್ಗೆ ಜನರಿಗೆ ಕೋಪವೂ ಇದೆ, ಭಯವೂ ಇದೆ. ಹಾಗಾಗಿ ಈಗಿನಿಂದಲೇ ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್ ರಮೇಶ್ (Jairam Ramesh) ಆರೋಪಿಸಿದ್ದಾರೆ.

ಮೋದಿ ಅವರ ಅನ್ಯಾಯ ಕಾಲದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ ʻಮ್ಯಾಚ್-ಫಿಕ್ಸ್ʼ ಮಾಡಲು ಪ್ರಯತ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ (Rahul Gandhi), ಸರ್ವಾಧಿಕಾರಿಯ ನಿಜವಾದ ಮುಖ ಮತ್ತೊಮ್ಮೆ ದೇಶದ ಮುಂದಿದೆ. ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶಪಡಿಸುವ ಮತ್ತೊಂದು ಹೆಜ್ಜೆ ಎಂದು ದೂರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!