ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಹೊಸದಿಗಂತ ವರದಿ ಕಾರವಾರ: ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರವಾರ ಅಂಕೋಲಾ ಘಟಕಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಶುಕ್ರವಾರ ಭಾರೀ ಪ್ರತಿಭಟನೆ ನಡೆಯಿತು. ನಗರದ ಮಿತ್ರ ಸಮಾಜ ಮೈದಾನದಿಂದ ಬಿಜೆಪಿ ಪ್ರಮುಖರು,ಕಾರ್ಯಕರ್ತರು ಮೆರವಣಿಗೆಯಲ್ಲಿ ಬಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಮಾತನಾಡಿದಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಆಡಳಿತ ನಡೆಸುತ್ತಿದ್ದು ಜನರ ಸಮಸ್ಯೆಗಳಿಗೆ … Continue reading ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ