ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಇಂದು ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ನಡೆಯಿತು. ಈ ವೇಳೆ ರಾಹುಲ್ ಗಾಂಧಿಯವರು ನೀಡಿರುವ ಹಿಂದುತ್ವದ ಅವಹೇಳನ ಕುರಿತಾಗಿ ಖಂಡನೆ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ತಿಳಿಸಿದ್ದಾರೆ.
ಸಿದ್ದರಾಮಯ್ಯನವರ ಸರಕಾರವು ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಅವರ ಜನವಿರೋಧಿ ನೀತಿಯನ್ನು ಜನರಿಗೆ ಅರ್ಥೈಸಬೇಕು. ಈ ಹಿನ್ನೆಲೆಯಲ್ಲಿ ಇದೇ 18 ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ
ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗಿಯಾಗಿದ್ದು, ಸಿದ್ದು ಸರ್ಕಾರದ ವೈಫಲ್ಯದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಪೈಕಿ ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನದಲ್ಲಿ ದುರುಪಯೋಗ, ಬರಪೀಡಿತ ಪ್ರದೇಶ ಘೋಷಣೆಯಾಗದ ಕುರಿತು, ಹಾಗೂ ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿಯವರು ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.