ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಬಿಜೆಪಿ ಲೇವಡಿ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ಪೋಸ್ಟರ್ ಅಂಟಿಸಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಾಕಷ್ಟು ಪೋಸ್ಟರ್‌ಗಳನ್ನು ಅಂಟಿಸಿ ಲೇವಡಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾತನಾಡಲು ಆರಂಭಿಸಿದೆ.
ಚಿಕ್ಕಮಗಳೂರಿನ ತಾಲೂಕು ಕಚೇರಿಗಳಲ್ಲಿ ಪೋಸ್ಟರ್ ಅಂಟಿಸಿದ್ದು, ಸಿಎಂ ಪುತ್ರ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಹಾಗೂ ಸಚಿವ ಕೆಜೆ ಜಾರ್ಜ್ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಅಂಟಿಸಲಾಗಿದೆ.