ಹೊಸದಿಗಂತ ಡಿಜಿಟಲ್ ಡೆಸ್ಕ್:
ಆ. 23ರಂದು ರಾಜ್ಯ ಸರ್ಕಾರದ ವಿರುದ್ಧ ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಆ.28 ಕ್ಕೆ ಮುಂದೂಡಿಕೆಯಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಆರೋಪ ಮಾಡಿರುವ ಬಿಜೆಪಿ ಆ.23 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.ಆದರೀಗ ಈ ಪ್ರತಿಭಟನೆಯನ್ನು ಆಗಸ್ಟ್ 28 ಕ್ಕೆ ಮುಂದೂಡಿದೆ. ಸೆಪ್ಟೆಂಬರ್ 8ರೊಳಗೆ ಜಿಲ್ಲಾವಾರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಆಪರೇಷನ್ ಹಸ್ತ, ಲೋಕಸಭೆ ಚುನಾವಣೆಗೆ ತಯಾರಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಇಂದು ಬಿಜೆಪಿ ನಾಯಕರು ಕೋರ್ ಕಮಿಟಿ ಸಭೆ ಕೂಡ ನಡೆಸಿದ್ದಾರೆ.
ಸಭೆಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಗೂ ಬಸವರಾಜ ಬೊಮ್ಮಾಯಿ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು.