Friday, February 3, 2023

Latest Posts

ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ : ಅಮಿತ್‌ ಶಾ ನೇತೃತ್ವದಲ್ಲಿ ಇಂದು ಬೃಹತ್‌ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗೃಹ ಸಚಿವ ಅಮಿತ್‌ ಶಾ ಮಂಡ್ಯದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲು ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಅಮಿತ್‌ ಶಾ ಇಂದು ಮತ್ತು ನಾಳೆ ರಾಜ್ಯದಲ್ಲಿ ಸಂಚರಿಸಲಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಭರದ ಸಿದ್ಧತೆ ನಡೆಸಿದ್ದಾರೆ.

ಮದ್ದೂರಿನ ಹಾಲು ಉತ್ಪಾದಕ ಕಟ್ಟಡ ಹಾಗೂ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಬಳಿಕ ಇಂದು ಮಧ್ಯಾಹ್ನ 12.30ಕ್ಕೆ ಮಂಡ್ಯದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಎಲ್ 2 ಮತ್ತು ಬೂತ್ ಅಧ್ಯಕ್ಷರಿಗೂ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಡುತ್ತಿರುವ ಹೆಜ್ಜೆ ಬಗ್ಗೆ ವಿಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ. ಇಂದು ಅಮಿತ್‌ ಶಾ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ನಿರ್ಮಿಸಿದೆ. ಕಾಂಗ್ರೆಸ್‌-ಜೆಡಿಎಸ್‌ ಕೂಡ ತಾವೇನು ಕಡಿಮೆಯಿಲ್ಲದಂತೆ ಚುನಾವಣೆಯನ್ನು ಗಮನದಲ್ಲಿರಿಸಿ ಯಾತ್ರೆಗಳನ್ನು ನಡೆಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!