ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚುನಾವಣಾ ಅಖಾಡ ಇನ್ನಷ್ಟು ರಂಗೇರಿದ್ದು, ಪಕ್ಷಗಳು ಮತದಾರರ ಮನ ತಲುಪುವ ಭರದ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.
ವಿಧಾನ ಸಭಾ ಚುನಾವಣೆ ಎದುರಿಸಲು ಬಿಜೆಪಿ ಈಗಾಗಲೆ ರಣತಂತ್ರ ಹೆಣೆದಿದೆ. ಇದರ ಭಾಗವಾಗಿ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ರಾಜ್ಯ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದ್ದಾರೆ.
ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕೆ ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಮಾಧ್ಯಮ ಸಂಚಾಲಕ ಅನಿಲ್ ಬಲುನಿ, ಕೇಂದ್ರ ಸಚಿವರಾದ ಭಗವಂತ ಖೂಬಾ, ರಾಜೀವ್ ಚಂದ್ರಶೇಖರ್, ರಾಷ್ಟ್ರೀಯ ವಕ್ತಾರ ಸಯ್ಯದ್ ಜಾಫರ್ ಇಸ್ಲಾಂ, ಸಚಿವರು, ಶಾಸಕರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.