‘ನಾನು ತಮಿಳಿಗ’ ಎಂದ ರಾಹುಲ್ ಗಾಂಧಿಗೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ರಾಹುಲ್ ಗಾಂಧಿ ತಮ್ಮ ಭಾಷಣದ ಉದ್ದಕ್ಕೂ ತಮಿಳುನಾಡಿನ ವಿಚಾರ ಮಾತನಾಡಿದ್ದಾರೆ. ಈ ಕುರಿತು ಸುದ್ಧಿಗಾರರು ಕೇಳಿದಾಗ ಮೈ ತಮಿಳು ಹೂಂ ನಾ (ನಾನು ತಮಿಳಿಗ) ಎಂದು ಹೇಳಿದ್ದರು. ಇದೀಗ ಈ ಹೇಳಿಕೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.
ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ರಾಹುಲ್​ ಗಾಂಧಿ ಮಾತನಾಡಿದ್ದಾರೆ. ಆದರೆ ‘ತಮಿಳುನಾಡಿನಲ್ಲಿ ಬರುವ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನ ಕಾದು ನೋಡಿ, ತಮಿಳುನಾಡಿನ ಮಣ್ಣಿನ ಮಗನಾದ ರಾಹುಲ್ ಗಾಂಧಿ’ ಎಂದು ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ರಾಹುಲ್ ಗಾಂಧಿ , ಯಾವುದೇ ಕಾಲಕ್ಕೂ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!