Friday, August 12, 2022

Latest Posts

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ಗೆ ದ.ಕ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಗಳೂರು:

ಕರಾವಳಿ ಮಾದರಿಯಲ್ಲಿ ರಾಜ್ಯದ ಎಲ್ಲೆಡೆ ಬಿಜೆಪಿ ಸಂಘಟನಾತ್ಮಕವಾಗಿ ಇನ್ನಷ್ಟು ಸದೃಢವಾಗಿ ಬೆಳೆಯುತ್ತಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನಾ ಶಕ್ತಿಗೆ ಅಭೂತಪೂರ್ವ ಜಯ ದೊರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.
ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪಕ್ಷದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ, ಬಿ.ಎಸ್.ಯಡಿಯೂರಪ್ಪ ಅವರು ನೀಡಿದ ಜನಪರ ಆಡಳಿತ, ಈಗಿನ ಮುಖ್ಯಮಂತ್ರಿ ಬೊಮ್ಮಾಯಿ ಅವರ ಅಭಿವೃದ್ಧಿಯ ಚಿಂತನೆಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದರು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತನಾಡಿ ` ದಕ್ಷಿಣ ಕನ್ನಡದ ನಾಯಕ ನಳಿನ್‌ಕುಮಾರ್ ಅವರ ಸಮರ್ಥ ನೇತ್ರೃತ್ವದಲ್ಲಿ ಉತ್ತರ ಕರ್ನಾಟಕದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಕೀರ್ತಿ ಪತಾಕೆ ಹಾರಿಸಿದೆ ಎಂದು ಹೇಳಿದರು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಎಂಎಲ್‌ಸಿ ಕೆ.ಮೋನಪ್ಪ ಭಂಡಾರಿ , ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss