ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಸಂಬಂಧ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಚುನಾವಣಾ ಸಿದ್ಧತೆ ಎಂಬಂತೆ ಕಾಂಗ್ರೆಸ್ ಮುಖಂಡ ಗುಲಾಮ್ ಅಹ್ಮದ್ ಮೀರ್ ಅವರು ಕಣಿವೆ ರಾಜ್ಯಕ್ಕೆ ಭೇಟಿ ನೀಡಿ ಸೀಟು ಹಂಚಿಕೆ ಕುರಿತು ವಿವಿಧ ಪಕ್ಷಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಿಗೇ ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಲಿದ್ದು, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಮುಖಂಡರೊಂದಿಗೆ ರಣತಂತ್ರ ರೂಪಿಸಲಿದ್ದಾರೆ.
ನಡ್ಡಾ, ಇಲ್ಲಿನ ಐತಿಹಾಸಿಕ ರಘುನಾಥ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಜಮ್ಮು ಹಾಗೂ ಕಾಶ್ಮೀರದ ಉಸ್ತುವಾರಿ ತರುಣ್ ಚುಗ್ ಅವರ ಸಹಿತ ವಿವಿಧ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ರೈನಾ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ