ಇಂದು ಗಂಡು ಮೆಟ್ಟಿದ ನಾಡಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಗಮನ: ‘ಲೋಕ’ ಕಣದಲ್ಲಿ ಭರ್ಜರಿ ಪ್ರಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಖಂಡಿಸಿ ಹಾಗೂ ಹಂತಕನಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿವೆ.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಇಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಗೆ ಭೇಟಿ ನೀಡಲಿರುವ ಜೆ.ಪಿ.ನಡ್ಡಾ ವಿವಿಧ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೆ.ಪಿ.ನಡ್ಡಾ ಇಂದು ಮಧ್ಯಾಹ್ನ 2:00 ಗಂಟೆಗೆ ಹುಬ್ಬಳ್ಳಿ ತಲುಪಲಿದ್ದು, ರಾತ್ರಿ 10:00 ಗಂಟೆಯವರೆಗೆ ಪ್ರಚಾರ ಕಾರ್ಯಗಳಲ್ಲಿ ನಿರತರಾಗಿರುತ್ತಾರೆ. ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್ ನಲ್ಲಿ ವಿವಿಧ ಸಮಾಜದ ಮುಖಂಡರ ಜತೆ ಸಭೆ ಏರ್ಪಡಿಸಲಾಗಿದೆ.

ನಂತರ ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಮತಯಾಚಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!