ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅಲೆ ಚುನಾವಣೆಯಲ್ಲಿ ನನ್ನನ್ನು ಖಂಡಿತ ಗೆಲ್ಲಿಸುತ್ತೆ: ಬಿ.ಶ್ರೀರಾಮುಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ಷೇತ್ರದಲ್ಲಿ ಚುರುಕಿನ ಪ್ರಚಾರ ಕೈಗೊಂಡಿರುವೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅಲೆ ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸುತ್ತೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಕಾರ್ಯಕರ್ತರೊಂದಿಗೆ ತಾಲೂಕಿನ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಭೇಟಿ ನೀಡಿದ ಅವರು ಆರಾಧ್ಯ ದೈವ ಮರುಳಸಿದ್ದ ಸ್ವಾಮಿಯ ದರ್ಶನ ಪಡೆದರು. ಬಳಿಕ ಜ.ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸಲಿದ್ದು, ಪೂರ್ವದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸುವುದಾಗಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಂಡೂರು ಶಾಸಕ ತುಕಾರಾಂ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷದ ಮುಖಂಡರು ಈಗಾಗಲೇ ನಿರ್ಧರಿಸಿದ್ದಾರೆ. ತುಕಾರಾಂ ಅವರ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!