ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ನಾಳೆಗೆ ವಿಧಾನಸಭೆ, ಪರಿಷತ್ ಕಲಾಪ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಚರ್ಚಿಸಲು ಅವಕಾಶ ನೀಡುವಂತೆ ವಿಪಕ್ಷಗಳು ಸದನದ ಭಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪವನ್ನು ನಾಳೆ ಬೆಳಿಗ್ಗೆ 10.30ಕ್ಕೆ ಹಾಗೂ ಪರಿಷಕ್ ತಲಾಪವನ್ನು ನಾಳೆ ಬೆಳಿಗ್ಗೆ 11ಕ್ಕೆ ಮುಂದೂಡಿಕೆ ಮಾಡಲಾಗಿದೆ.

ವಿಧಾನ ಪರಿಷತ್​ ಕಲಾಪ ಆರಂಭವಾಗುತ್ತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬಿಜೆಪಿ ಸದಸ್ಯರು ಆಗ್ರಹಿಸಿದರು. ಈ ಬಗ್ಗೆ ಪ್ರಶ್ನೋತ್ತರ ಕಲಾಪದ ಬಳಿಕ ಅವಕಾಶ ನೀಡುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದರೂ ಒಪ್ಪದ ಬಿಜೆಪಿ ಸದಸ್ಯರು, ಸದನದ ಬಾವಿಗಿಳಿದು ಧರಣಿ ನಡೆಸಿದರು. ಹೀಗಾಗಿ ಸಭಾಪತಿಯವರು ಕೆಲಕಾಲ ಕಲಾಪ ಮುಂದೂಡಿದ್ದಾರೆ.

ವಿಧಾಸನಭೆಯಲ್ಲಿ ವಿಪಕ್ಷ ಬಿಜೆಪಿ ಗದ್ದಲದ ಹಿನ್ನಲೆಯಲ್ಲಿ ಕಲಾಪವನ್ನು ನಾಳೆ ಬೆಳಿಗ್ಗೆ 10.30ಕ್ಕೆ ಮುಂದೂಡಿಕೆ ಮಾಜಿರುವುದಾಗಿ ಸ್ಪೀಕರ್ ಯು.ಟಿ ಖಾದರ್ ಘೋಷಣೆ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!