ಹೊಸದಿಗಂತ ವರದಿ ಸಿರುಗುಪ್ಪ:
ರೈತ ವಿದ್ಯಾನಿಧಿ, ಗೋಶಾಲೆ ಯೋಜನೆ, ಎಪಿಎಂಸಿ ಕಾಯ್ದೆ ಹಾಗೂ ಶ್ರಮ ಶಕ್ತಿ ಯೋಜನೆ, ಕೃಷಿ ಭೂಮಿ ಮಾರಾಟ ಕಾಯ್ದೆ ಸೇರಿದಂತೆ ಬಿಜೆಪಿ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ರದ್ದುಪಡಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗುಂಡಿಗನೂರು ಪ್ರಕಾಶಗೌಡ ಹಾಗೂ ತಾಲೂಕು ರೈತ ಮೋರ್ಚಾ ಅಧ್ಯಕ್ಷ ರಾಘವೇಂದ್ರ ರೆಡ್ಡಿ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಿಂದ ಪ್ರಾರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ನಡೆಯಿತು. ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷ ಶಂಕರಪ್ಪ, ಮಲ್ಲಿಕಾರ್ಜುನ ಸ್ವಾಮಿ, ಮುಖಂಡರಾದ ದಮ್ಮೂರು ಸೋಮಪ್ಪ, ವೀರನಗೌಡ ಕೋರಿ, ಪಿಡ್ಡಯ ಕೃಷ್ಣರಾಜ, ಮೋಹನ್ ರೆಡ್ಡಿ, ಸುಳ್ಳು ವಾಯು ಮಲ್ಲಿಕಾರ್ಜುನ, ರಾಮಕೃಷ್ಣ, ನಟರಾಜ, ಮಂಜಪ್ಪ, ಗಂಗಾಧರ ಸೇರಿದಂತೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.