ಕಾಂಗ್ರೆಸ್ ವಿರುದ್ಧ ಬೆಂಗಳೂರಿನಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅನ್ಯಾಯವನ್ನು ಖಂಡಿಸಿ ಇಡೀ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್‌ನ ಪ್ರತಿಭಟನೆಗೆ ಈಗ ಬಿಜೆಪಿಯಿಂದ ಪ್ರತಿಭಟನೆ ಎದುರಾಗಲಿದೆ.

ಹೌದು, ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಯಲಿದೆ. ಬಿಜೆಪಿಯ ಎಲ್ಲ ಸಂಸದರು ಹಾಗೂ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!