ಹೊಸದಿಗಂತ ವರದಿ ಧಾರವಾಡ:
ರಾಜ್ಯ ಕಾಂಗ್ರೆಸ್ ಸಂಗೀತ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಹೊಸ-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ತೆಂಗಿನಕಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕಿ ಸೀಮಾ ಮಸೂತಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮೋಹನ ರಾಮದುರ್ಗ, ರಾಜಣ್ಣ ಕೊರವಿ, ಸುರೇಶ ಬೇದರೆ, ಜ್ಯೋತಿ ಪಾಟೀಲ ಅನೇಕರು ಇದ್ದರು.