ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ

ಹೊಸದಿಗಂತ ವರದಿ, ಕೊಡಗು:

ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದೆ. ಅಲ್ಲದೆ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದು ಖಂಡನೀಯವೆಂದರು. ಅಲ್ಲದೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳನ್ನು ತಕ್ಷಣ ನಿಷೇಧಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಮುಸಲ್ಮಾನರ ಮತಗಳಿಗಾಗಿ ಕಾಂಗ್ರೆಸ್ ಹಿಂದೂ ಮತ್ತು ದೇಶ ವಿರೋಧಿ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಬಿಜೆಪಿ ವಕ್ತಾರ ಮಹೇಶ್ ಜೈನಿ, ಪ್ರಮುಖರಾದ ಬಿ.ಬಿ.ಭಾರತೀಶ್, ಯುಮುನಾ ಚಂಗಪ್ಪ, ಮನುಮುತ್ತಪ್ಪ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!