May 31, 2026
Sunday, May 31, 2026
spot_img

ಪ್ರಧಾನಿ ಮೋದಿ ಭಯೋತ್ಪಾದಕ ಎಂದು ಹೇಳಿದ ಖರ್ಗೆ ವಿರುದ್ದ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ :

ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಅವಹೇಳನಕಾರಿಯಾಗಿ ಕರೆದಿದ್ದನ್ನು‌ ಖಂಡಿಸಿ ಬೆಳಗಾವಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬೃಹತ್ ಪ್ರತಿಭಟನೆಯನ್ನು ನಡೆಸಿದರು. ‌

ಗುರುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ತೀರ್ವ ಅಸಮಾಧಾನ ಹೋರ ಹಾಕಿ ಚನ್ನಮ್ಮ ವೃತ್ತದಲ್ಲಿ ಭ್ರಷ್ಟ‌ ಕಾಂಗ್ರೆಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಆಕ್ರೋಶವನ್ನು ಹೋರ ಹಾಕಿದರು.‌

ಕಾಂಗ್ರೆಸ್ ನ ಸಂಸ್ಕೃತಿ ಇನ್ನೊಬ್ಬರ ಬಗ್ಗೆ ಅವಹೇಳನಕಾರಿ ಯಾಗಿ ಮಾತ ನಾಡುವುದೇ ಅವರ ಕೆಲಸ ಅದು ಅದನ್ನೆ ಮಾಡಿಕೊಂಡು ಬಂದಿದ್ದರೂ ಈಗಲೂ ಹಳೆಯ ಚಾಳಿಯನ್ನು ಮುಂದು ವರೆಸಿಕೊಂಡು ಬರುತ್ತಿದ್ದಾರೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೂಡಲೇ ವಜಾ ಗೊಳಿಸಬೇಕೆಂದು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಈ ವೇಳೆ ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ, ಪಂಡಿತ ಓಗ್ಲೆ, ಮಹಿಳಾ ಕಾರ್ಯಕರ್ತರು ಸೇರಿದಂತೆ ಹಲವು ಬಿಜೆಪಿ‌ ಕಾರ್ಯಕರ್ತರು ಇದ್ದರು.‌

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !