ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪೊಲೀಸ್ ಠಾಣೆ ಮುಂಭಾಗ ಬಿಜೆಪಿ ಪ್ರತಿಭಟನೆ

ಹೊಸದಿಗಂತ ವರದಿ, ಹುಬ್ಬಳ್ಳಿ:

ನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 1992ರಲ್ಲಿ ನಡೆದ ರಾಮಜನ್ಮಭೂಮಿ ಹೋರಾಟ ಸಂದರ್ಭದ ಗಲಭೆಯಲ್ಲಿ ಆರೋಪಿಯಾಗಿಸಿ ಶ್ರೀಕಾಂತ್ ಪೂಜಾರಿ ಎಂಬವರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮಹಾನಗರ ವತಿಯಿಂದ ಬೃಹತ್ ಪ್ರತಿಭಟನೆ ಆರಂಭವಾಗಿದೆ.

ನಗರದ ದುರ್ಗಾಬೈಲ್ ಬ ಬ್ರಾಡವೇ ಹತ್ತಿರವಿರುವ ಶಹರ ಪೊಲೀಸ್ ಠಾಣೆ ಎದುರು ಸಮಾವೇಶಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಿಂದು ವಿರೋಧಿ ಸಿದ್ದರಾಮಯ್ಯ, ಕಾಂಗ್ರೆಸ್, ರಾಹುಲ್ ಗಾಂಧಿ ಹಾಗೂ ಪೊಲೀಸ್ ಇಲಾಖೆಗೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಮುಗಿಲು ಮುಟ್ಟಿದವು. ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕೆಲವೇ ಕ್ಷಣದಲ್ಲಿ ಪ್ರತಿಭಟನೆ ಭಾಗವಹಿಸಲಿದ್ದಾರೆ ಎಂದು ಪ್ರತಿಭಟನಾ ನಿರತರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಮುಖಂಡರಾದ ಜಯತೀರ್ಥ ಕಟ್ಟಿ, ಸಂಜಯ ಕಪಟಕರ, ರಂಗಾ ಬದ್ದಿ, ದತ್ತ ಮೂರ್ತಿ ಕುಲಕರ್ಣಿ, ಶಿವಾನಂದ ಮೆಣಸಿನಕಾಯಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!