ದಿಗಂತ ವರದಿ ಕಾರವಾರ:
ರಾಜ್ಯಪಾಲರ ವಿರುದ್ಧ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಅಗ್ರಹಿಸಿ ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು , ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಸಂತೋಷ್ ನಾಯ್ಕ ರವರು ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ನೇರವಾಗಿ ಮುಡಾ ಹಗರಣದಲ್ಲಿ ಸಿಲುಕಿದರೂ ಕೂಡ ತಮ್ಮ ಖುರ್ಚಿ ಬಿಡುತ್ತಿಲ್ಲ. ಅವರು ಭ್ರಷ್ಟಾಚಾರ ಮಾಡಿಲ್ಲ ಅಂದರೆ ಜನ ಯಾಕೆ ಪ್ರತಿಭಟನೆ ಮಾಡುತ್ತಿದ್ದರು. ಎಸ್ಸಿಎಸ್ಟಿ ಫಂಡ್ ಯಾಕೆ ದುರುಪಯೋಗ ಆಗಿದೆ ಎಂಬುದನ್ನ ಸಿಎಂ ತಿಳಿಸಬೇಕೆಂದು ಒತ್ತಾಯಿಸಿದರು.