ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಬೋರ್ಡ್ ಕರ್ನಾಟಕದ ವಿವಿಧ ಜಿಲ್ಲೆಗಳ ರೈತರಿಗೆ ನೋಟಿಸ್ ಜಾರಿ ಮಾಡಿದೆ. ಈ ಕುರಿತು ನವೆಂಬರ್ 25 ರಿಂದ ಡಿಸೆಂಬರ್ 25 ರವರೆಗೆ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ.
ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ತಿಳಿಸಲು ನಾವು ವಾರ್ ರೂಂ ರಚಿಸಿದ್ದೇವೆ. ವಕ್ಫ್ ಸಮಸ್ಯೆಗಳನ್ನು ಎದುರಿಸುತ್ತಿರುವ ಜನರು ತಮ್ಮ ದೂರನ್ನು WhatsApp ಸಂಖ್ಯೆ 9035675734 ನಲ್ಲಿ ತಿಳಿಸಬಹುದು. ನಮ್ಮ ಯಾವುದೇ ನಾಯಕರನ್ನೂ ಭೇಟಿ ಮಾಡಿ ಮಾಹಿತಿ ಪಡೆಯಲು ಅವಕಾಶವಿದೆ. ನ.25ರಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಬಿ.ಪಿ. ಹರೀಶ್, ಅಣ್ಣಾ ಸಾಹೇಬ್ ಜೊಲ್ಲೆ ಸೇರಿದಂತೆ ಹಲವರು ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ.