ಅರುಣಾಚಲ ಪ್ರದೇಶ, ಪ.ಬಂಗಾಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರುಣಾಚಲ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆ ಉಪಚುನಾವಣೆಗಾಗಿ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರುಣಾಚಲ ಪ್ರದೇಶದ ಲುಮ್ಲಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಜಂಬೆ ತಾಶಿ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಕ್ಕೆ ಬಿಜೆಪಿ ತ್ಸೆರಿಂಗ್ ಲಾಮು ಅವರ ಹೆಸರು ಘೋಷಣೆ ಮಾಡಲಾಗಿದೆ. ಇನ್ನೂ ಪಶ್ಚಿಮ ಬಂಗಾಳದ ಸಗರ್ದಿಗಿ ಕ್ಷೇತ್ರದ ಟಿಎಂಸಿ ನಾಯಕಿ ಸುಬ್ರತಾ ಸಾಹ ನಿಧನದಿಂದ ತೆರವಾಗಿರುವ ಸ್ಥಾನಕ್ಕೂ ಉಪ ಚುನಾವಣೆ ನಡೆಯಲಿದ್ದು, ಇಲ್ಲಿಗೆ ದಿಲೀಪ್‌ ಸಾಹಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಈ ಎರಡೂ ಕ್ಷೇತ್ರಗಳಲ್ಲಿ ಫೆಬ್ರವರಿ 27ಕ್ಕೆ ಚುನಾವಣೆ ನಡೆಯಲಿದ್ದು, ಮಾರ್ಚ್ 2ಕ್ಕೆ ಫಲಿತಾಂಶ ಹೊರಬೀಳಲಿದೆ.

Image

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!