ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಹಲವು ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.
ಬಿಜೆಪಿ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 12 ಹಾಗೂ 3ನೇ ಪಟ್ಟಿಯಲ್ಲಿ 18 ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂರ್‌ಗೆ ಆಲಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಇನ್ನೂ ಜೆಡಿಯು ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ 29, ಎಚ್‌ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ


