ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿ ಸಹಿತ 40 ಸ್ಟಾರ್ ಪ್ರಚಾರಕರನ್ನು ಹೆಸರಿಸಲಾಗಿದೆ.
ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ನಾಯಕರ ಹೆಸರುಗಳಿವೆ.