ಹೊಸದಿಗಂತ ವರದಿ ಪುತ್ತೂರು:
ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ನರೇಂದ್ರ ಮೋದಿಜೀ ಅವರ 9 ವರ್ಷಗಳ ಸಾಧನೆಯನ್ನು ಮಹಾ ಸಂಪರ್ಕ ಅಭಿಯಾನ ಮಾಡುವ ಮೂಲಕ ಮನೆ ಮನೆಗೆ ತಿಳಿಸುವ ಪದಾಧಿಕಾರಿಗಳ ಸಭೆ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಇದೇ ಸಂದರ್ಭ ಕೇಂದ್ರದ 9 ವರ್ಷಗಳ ಸಾಧನೆಯನ್ನು ಮತದಾರರಿಗೆ ತಿಳಿಸುವ ಸಾಹಿತ್ಯದ ಚಾಲನೆ ನೀಡಲಾಯಿತು.
ಈ ಸಂದರ್ಭ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ಮಂಡಲದ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಮೀನಾಕ್ಷಿ ಮಂಜುನಾಥ್, ಉಷಾ ಚಂದ್ರ ಮುಳಿಯ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಯುವರಾಜ್ ಕೆ. ಪೆರಿಯಾತ್ತೋಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುರೇಶ್ ಆಳ್ವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ದಯಾನಂದ ಶೆಟ್ಟಿ ಉಜಿರೆಮಾರು, ಸುನೀಲ್ ಕುಮಾರ್ ದಡ್ಡು, ಪುನೀತ್ ಮಾಡತ್ತಾರು ಹಾಗೂ ಮಂಡಲದ ಪದಾಧಿಕಾರಿಗಳು,ಮೋರ್ಚಾ- ಪ್ರಕೋಷ್ಟ ಪದಾಧಿಕಾರಿಗಳು, ಹಿರಿಯ, ಕಿರಿಯ ಕಾರ್ಯಕರ್ತರು ಭಾಗವಹಿಸಿದರು.