ನಾಳೆ ಶಿವಮೊಗ್ಗಕ್ಕೆ ಬಿಜೆಪಿ ‘ಸತ್ಯಶೋಧನ’ ತಂಡ ಭೇಟಿ

ಹೊಸದಿಗಂತ ವರದಿ ಬೆಂಗಳೂರು:

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ  ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದು, ಗಲಭೆ ನಡೆದ ಸ್ಥಳಕ್ಕೆ ಅ.5ರಂದು ಭೇಟಿ ನೀಡಲಿದ್ದಾರೆ.

ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ರಾಗಿಗುಡ್ಡಕ್ಕೆ ಬೆಳಗ್ಗೆ 11 ಗಂಟೆಗೆ ಭೇಟಿ ನೀಡಲಿದೆ.

ಈ ತಂಡದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಅರಗ ಜ್ಞಾನೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ  ಎನ್.ರವಿಕುಮಾರ್, ಶಾಸಕರಾದ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ  ಎಸ್. ರುದ್ರೇಗೌಡ, ಶ್ರೀ ಡಿ.ಎಸ್. ಅರುಣ್, ಶ್ರೀಮತಿ ಭಾರತಿ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!