June 30, 2026
Tuesday, June 30, 2026
spot_img

ಅಣ್ಣಾಮಲೈ ಪಕ್ಷ ಬಿಟ್ಟು ಹೋಗಿದ್ದಕ್ಕೆ ನಮಗೇನೂ ಲಾಸ್‌ ಇಲ್ಲ ಎಂದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿರುವ ಅಣ್ಣಾಮಲೈ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆ ಮಾಡುತ್ತೇನೆಂದು ಹೇಳಿದ್ದಾರೆ. ಇತ್ತ ಅಣ್ಣಾಮಲೈ ನಮ್ಮ ಪಕ್ಷ ಬಿಟ್ಟು ಹೋಗಿದ್ದಕ್ಕೆ ನಮಗೇನೂ ನಷ್ಟ ಇಲ್ಲ ಎಂದು ಬಿಜೆಪಿ ಹೇಳಿದೆ.

ತಮಿಳುನಾಡಿನಲ್ಲಿ ಬಿಜೆಪಿ ತನ್ನ ಯೋಜನೆಗಳನ್ನು ಮುಂದುವರಿಸಲಿದೆ. ಅಣ್ಣಾಮಲೈ ರಾಜೀನಾಮೆ ನೀಡಿದ್ದರಿಂದ ಏನೂ ಸಮಸ್ಯೆ ಇಲ್ಲ ಎಂದಿದೆ. ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ಅವರಿಂದ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆ ಆಗಲಿದೆ. ಆದರೆ ಅದಕ್ಕೂ ಮೊದಲು ಅವರು ರಾಜ್ಯದಲ್ಲಿ ಸಾಮಾಜಿಕ ಚಳುವಳಿಯನ್ನು ಆರಂಭಿಸಲಿದಾರೆ.

ನಾವು ಮೊದಲು ತಮಿಳುನಾಡಿನಲ್ಲಿ ಜನಚಳುವಳಿಯನ್ನು ಸಂಘಟಿಸುತ್ತೇವೆ. ಆ ಬಳಿಕ ಪಕ್ಷ ಸಂಘಟನೆ ಮಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !