ಬಿಜೆಪಿ ಎರಡನೇ ಪಟ್ಟಿ ರಿಲೀಸ್: ದ.ಕ. ಜಿಲ್ಲೆಗೆ ಕ್ಯಾ. ಬ್ರಿಜೇಶ್‌ ಚೌಟ, ಉಡುಪಿ- ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ನಿರೀಕ್ಷೆಯಂತೆ ಕೆಲವು ಹಾಲಿ ಸಂಸದರಿಗೆ ಕೊಕ್​ ನೀಡಲಾಗಿದ್ದು, ಕೊಪ್ಪಳ, ಬಳ್ಳಾರಿ, ಹಾವೇರಿ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಉಡುಪಿ-ಚಿಕ್ಕಮಗಳೂರು, ತುಮಕೂರು, ಚಾಮರಾಜನಗರದಲ್ಲಿ ಹಾಲಿ ಸಂಸದರಿಗೆ ಕೊಕ್​ ನೀಡಲಾಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

ಮೈಸೂರಿನಿಂದ ಯದುವೀರ್‌ ಒಡೆಯರ್‌, ಹಾವೇರಿಯಿಂದ ಮಾಜಿ ಸಿಎಂ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಬದಲು ಕ್ಯಾ. ಬ್ರಿಜೇಶ್‌ ಚೌಟ ಅವರಿಗೆ ಟಿಕೆಟ್ ಸಿಕ್ಕಿದೆ. ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್‌ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!