ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಮಾಜಿ ಸಿಎಂ ವಸುಂದರಾ ರಾಜೆಯನ್ನು ಬಿಜೆಪಿ ಕಡೆಗಣಿಸಿದೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಎರಡನೇಪಟ್ಟಿಯಲ್ಲಿ ವಸುಂದರಾ ರಾಜೆ ಸ್ಥಾನ ಪಡೆದಿದ್ದಾರೆ.
ಸಾಂಪ್ರದಾಯಿಕ ಕ್ಷೇತ್ರವಾದ ಜಾಲ್ರಾಪಟಣದಿಂದ ಟಿಕೆಟ್ ನೀಡಲಾಗಿದೆ. ಬಿಜೆಪಿ 2ನೇ ಲಿಸ್ಟ್‌ನಲ್ಲಿ 83 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ.
ಇತ್ತ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲೇ ಹಾಲಿ ಸಿಎಂ ಅಶೋಕ್ ಗೆಹ್ಲೋಟ್, ಬಂಡಾಯ ನಾಯಕ ಸಚಿನ್ ಪೈಲೆಟ್ ಸೇರಿದಂತೆ 33 ನಾಯಕರಿಗೆ ಟಿಕೆಟ್ ಘೋಷಿಸಿದೆ.
ಅಶೋಕ್ ಗೆಹ್ಲೋಟ್‌ನೆ ಸರ್ದಾಪುರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ. ಇನ್ನು ಟಾಂಕ್ ಕ್ಷೇತ್ರದಿಂದ ಸಚಿನ್ ಪೈಲೆಟ್‌ಗೆ ಟಿಕೆಟ್ ಘೋಷಿಸಲಾಗಿದೆ.
ನವೆಂಬರ್ 25 ರಂದು ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ರಾಜಸ್ಥಾನ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.