ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದಕ್ಷಿಣ ಭಾರತ ಕೈಹಿಡಿದಿದೆ. ಅದರಲ್ಲೂ ಪ್ರಮುಖವಾಗಿ ಕೇರಳದಲ್ಲಿ ಬಿಜೆಪಿ ಖಾತೆ ತರೆಯಲು ಸಜ್ಜಾಗಿದೆ.
ತ್ರಿಶೂರ್ ಕ್ಷೇತ್ರದಿಂದ ಸುರೇಶ್ ಗೋಪಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತ್ರಿಶೂರ್ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿತ್ತು. ನಟ, ನಾಯಕ ಸುರೇಶ್ ಗೋಪಿ ವಿರುದ್ಧ ಸಿಪಿಐ ಮಾಜಿ ಸಚಿವ ವಿಎಸ್ ಸುನೀಲ್ ಕುಮಾರ್, ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಕೆ ಮರುಳೀಧರನ್ ನಡುವೆ ತೀವ್ರ ಪೈಪೋಟಿ ಎರ್ಪಟ್ಟಿತ್ತು. ಆದರೆ ಸುರೇಶ್ ಗೋಪಿ 70,000 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸುರೇಶ್ ಗೋಪಿ ಗೆಲುವು ಬಹುತೇಕ ಪಕ್ಕಾ ಆಗಿದೆ.