ಹೊಸದಿಗಂತ ವರದಿ ವಿಜಯಪುರ:
ರಾಜ್ಯದಲ್ಲಿ ಬಿಜೆಪಿ ಮುಳುಗಿ ಹೋಗಿರುವ ಹಡಗು ಎಂದು ಸಚಿವ ಎಂ.ಬಿ. ಪಾಟೀಲ ಲೇವಡಿ ಮಾಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದರು.
ಚೈತ್ರಾ ಕುಂದಾಪುರ ಹಾಗೂ ಉಳಿದವರು ಬಿಜೆಪಿ ಟಿಕೆಟ್ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೇ, ರಾಜ್ಯದಲ್ಲಿ ಬಿಜೆಪಿಗೆ ವಿರೋಧ ಪಕ್ಷದ ನಾಯಕನ್ನು ಹೆಸರಿಸಲು ಆಗುತ್ತಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನಿಂದ ಬಿಜೆಪಿ ಇನ್ನೂ ಚೇತರಿಸಿಕೊಂಡಿಲ್ಲ ಎಂದರು.