ಬಿಜೆಪಿಗೆ ಸೋಲಿನ ಭಯ ಆರಂಭ …ಅದಕ್ಕಾಗಿ ಸಿಎಎ ಜಾರಿ: ಸಚಿವ ಪರಮೇಶ್ವರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಆರಂಭವಾಗಿದೆ.ಹೀಗಾಗಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಚುನಾವಣೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಲ್ಲಿ ರಾಜಕಿಕಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!