ಸೆ.11 ರಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಸೆಪ್ಟೆಂಬರ್ 11ರ ಭಾನುವಾರದಂದು ನಗರದ “ಅರಮನೆ ಮೈದಾನ”ದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಶ್ರೀಮತಿ ಡಿ.ಕೆ. ಅರುಣಾ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು ಮತ್ತು ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!