ಅನಾರೋಗ್ಯ ಹಿನ್ನೆಲೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಕಾರಣ ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಪ್ರವಾಸದಲ್ಲಿದ್ದ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರಿಗೆ ಸೋಮವಾರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!