‘ಹರ್ ಘರ್ ತಿರಂಗಾʼ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜನಜಾಗೃತಿ ಮೂಡಿಸಲು ಪ್ರತಿ ಮನೆಯಲ್ಲೂ ಭಾರತದ ತ್ರಿವರ್ಣ ಧ್ವಜವನ್ನು ಪ್ರದರ್ಶಿಸುವ ‘ಹರ್ ಘರ್ ತಿರಂಗ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿಂದು ಬೆಳಗ್ಗೆ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು, ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನ ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!