ಹೊಸದಿಗಂತ ವರದಿ, ಮಂಗಳೂರು:
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಹೊಸದಿಗಂತ ಪತ್ರಿಕೆಯ ಮಂಗಳೂರು ಪ್ರಧಾನ ಕಚೇರಿಗೆ ಭೇಟಿ ನೀಡಿದರು.
ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಹೊಸದಿಗಂತ ಸಿಇಒ, ಸಂಪಾದಕ ಪಿ.ಎಸ್. ಪ್ರಕಾಶ್ ಅವರು ಸ್ವಾಗತಿಸಿದರು. ಈ ವೇಳೆ ವಿಜಯೇಂದ್ರ ಅವರನ್ನು ಸನ್ಮಾನಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಡಾ.ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಪ್ರಮುಖರಾದ ರಾಜೇಶ್ ಕಾವೇರಿ, ಬೃಜೇಶ್ ಚೌಟ, ವಿಜಯಕುಮಾರ್ ಶೆಟ್ಟಿ, ಜಗದೀಶ ಶೇಣವ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.