ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ನಾಡಿನೆಲ್ಲೆಡೆ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿದೆ.
ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ಈಗ ಮನೆಮನೆಗಳಿಗೆ ತಲುಪುತ್ತಿದ್ದು, ಶ್ರೀರಾಮನ ಭಕ್ತರನ್ನು ಪುಳಕಿತಗೊಳಿಸುತ್ತಿದೆ. ಇಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆಯುತ್ತಿರುವ ಮನೆಮನೆಗೆ ಮಂತ್ರಾಕ್ಷತೆ ಅಭಿಯಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಖುದ್ದು ಭಾಗವಹಿಸಿದರು. ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ. ಮಂಜುನಾಥ್, ಮುಖಂಡ ಸಪ್ತಗಿರಿ ಗೌಡ ಸಹಿತ ಕಾರ್ಯಕರ್ತರು ಜೊತೆಗಿದ್ದರು.
ಮಂತ್ರಾಕ್ಷತೆ ವಿತರಣೆಗೂ ಮುನ್ನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ