ಶಿವಮೊಗ್ಗದಲ್ಲಿ ನ.25ರಿಂದ ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗ: ನಿರ್ಮಲ್‌ ಕುಮಾರ್‌ ಸುರಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನವೆಂಬರ್ 25ರಿಂದ 3 ದಿನಗಳ ಕಾಲ ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ಬಿಜೆಪಿ ರಾಜ್ಯ ಪ್ರಶಿಕ್ಷಣ ವರ್ಗವು ನಡೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಇದರ ನೇತೃತ್ವ ವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.

ರಾಜ್ಯದ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪ್ರಭಾರಿಗಳು ಈ ವರ್ಗದಲ್ಲಿ ಭಾಗವಹಿಸಲಿದ್ದು 3 ದಿನಗಳ ಕಾಲ ಪಕ್ಷದ ತತ್ವ- ಸಿದ್ಧಾಂತಗಳ ಭೂಮಿಕೆ ಸಂಬಂಧ ಮಾರ್ಗದರ್ಶನ ನೀಡಲಾಗುತ್ತದೆ. ಶಾರೀರಿಕ ಮತ್ತು ಬೌದ್ಧಿಕವಾಗಿ ಗುಣಮಟ್ಟದ ಕಾರ್ಯಕರ್ತರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಈ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ. ನ.27ರಂದು ಸಮಾರೋಪ ಕಾರ್ಯಕ್ರಮವು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!