ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..
ಹೊಸ ದಿಗಂತ ವರದಿ, ಕಲಬುರಗಿ:
ರಾಜ್ಯದ ಸವ೯ತೋಮುಖ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಆಶೀವಾ೯ದವನ್ನು ಮಾಡಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಅವರು ಕಲಬುರಗಿ ಮಹಾ ನಗರ ಪಾಲಿಕೆ ಚುನಾವಣಾ ನಿಮಿತ್ತ ಕಲಬುರಗಿ ಉತ್ತರ ಮಂಡಲದ ವಾರ್ಡ ನಂ 8 ಅಭ್ಯರ್ಥಿ ಸಚಿನ್ ಕಡಗಂಚಿ,ವಾರ್ಡ ನಂ 10 ಅಭ್ಯರ್ಥಿ ಜನಾಬಾಯಿ ಗಣಪತ ರಾವ,ವಾರ್ಡ 11 ಅಭ್ಯರ್ಥಿ ಪ್ರಭುಲಿಂಗ ಹಾದಿಮನಿ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಬಹಿರಂಗ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಬಿ.ಎಸ್.ಯಡಿಯೂರಪ್ಪ ರಾಜ್ಯದ ಅಭಿವೃದ್ಧಿ ಮಾಗ೯ದಶ೯ನದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿವೆ ಎಂದರು.
ಮುಂಬರುವ 3ನೇ ತಾರೀಖಿನ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗಳಿಗೆ ಮತ ಹಾಕುವ ಮೂಲಕ ಬಿಜೆಪಿ ಪಕ್ಷಕ್ಕೆ ಬೆಂಬಲಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮೂಡ,ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್,ದಿವ್ಯಾ ಹಾಗರಗಿ,ಮಲ್ಲಿಕಾರ್ಜುನ ಓಕಳಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು