Thursday, December 8, 2022

Latest Posts

ಹಿಮಾಚಲಪ್ರದೇಶ ಚುನಾವಣೆಯಲ್ಲಿ ಬಂಡಾಯ ಘೋಷಿಸಿದ ಐವರು ನಾಯಕರು ಬಿಜೆಪಿಯಿಂದ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಘೋಷಿಸಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಪಕ್ಷೇತರರಾಗಿ ಕಣಕ್ಕಿಳಿದಿರುವ ತನ್ನ ಐವರು ನಾಯಕರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಮಾಜಿ ಶಾಸಕರಾದ ತೇಜ್ವಂತ್ ಸಿಂಗ್ ನೇಗಿ (ಕಿನ್ನೌರ್), ಕಿಶೋರಿ ಲಾಲ್ (ಅನ್ನಿ), ಮನೋಹರ್ ಧಿಮಾನ್ (ಇಂದೋರಾ), ಕೆ ಎಲ್ ಠಾಕೂರ್ (ನಲಗಢ) – ಮತ್ತು ಬಿಜೆಪಿಯ ಹಿಮಾಚಲ ಘಟಕದ ಉಪಾಧ್ಯಕ್ಷ ಕೃಪಾಲ್ ಪರ್ಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಎಲ್ಲಾ ನಾಯಕರು ತಮ್ಮ ತಮ್ಮ ಕ್ಷೇತ್ರಗಳಿಂದ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಪರ್ಮಾರ್ ಫತೇಪುರ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
‘ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದಕ್ಕಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್ ಅವರು ಐವರು ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿದ್ದಾರೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನವೆಂಬರ್ 12 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!