ಬಿಜೆಪಿ ವಿಪಕ್ಷ ನಾಯಕನ ಹುದ್ದೆಗೂ ಟೆಂಡರ್: ಸಚಿವ ಶಿವರಾಜ್ ತಂಗಡಗಿ ಲೇವಡಿ

ಹೊಸದಿಗಂತ ವರದಿ ಬಾಗಲಕೋಟೆ:

ಬಿಜೆಪಿಯ ವಿಪಕ್ಷ ನಾಯಕನ ಸ್ಥಾನ ಆರ್.ಅಶೋಕ್ ಅವರಿಗೆ ಟೆಂಡರ್ ನಲ್ಲಿ ದೊರಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.

ಗುರುವಾರ ಬಾಗಲಕೋಟೆ ನವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಹಿಂದೆ ಅವರದ್ದೆ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಕ್ಕೆ ಹಣ ನಿಗದಿಯಾಗಿತ್ತು ಎಂದು ಹೇಳಿದ್ದರು. ಅದರಂತೆ ಇದೀಗ ವಿಪಕ್ಷ ನಾಯಕನ ಹುದ್ದೆಗೂ ಕೂಡ ಟೆಂಡರ್ ನಡೆದಿರಬಹುದು. ಟೆಂಡರ್ ಮೊತ್ತದ ಬಗ್ಗೆ ಅಶೋಕ್ ಅವರು ಹೇಳಬೇಕು ಎಂದರು.

ಮುಳುಗುವ ಹಡಗಲ್ಲ, ಮುಳುಗಿದ ಹಡಗು

ರಾಜ್ಯದಲ್ಲಿ ಬಿಜೆಪಿ ಮುಳುಗುವ ಹಡಗಲ್ಲ, ಈಗಾಗಲೇ ಮುಳುಗಿದ ಹಡಗು. ಜೋಡೆತ್ತು ಎನಿಸಿಕೊಳ್ಳುತ್ತಿರುವ ವಿಜಯೇಂದ್ರ ಹಾಗೂ ಆರ್. ಅಶೋಕ್ ಅಲ್ಲದೆ ಇನ್ನೂ ಎರಡೆತ್ತು ಬಂದರೂ ಮುಳುಗಿದ ಹಡಗನ್ನು ಮೇಲೆ ಎತ್ತಲು ಸಾಧ್ಯವಿಲ್ಲ. ವಿಜಯೇಂದ್ರ ಹಾಗೂ ಆರ್.ಅಶೋಕ್ ಅವರ ನೇಮಕದ ಬಗ್ಗೆ ಅವರದ್ದೆ, ಪಕ್ಷದಿಂದ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದವರು ಯಾರೂ ಮಾತನಾಡಿಲ್ಲ ಎಂದು ಮಾರ್ಮಿಕವಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!