Sunday, June 4, 2023

Latest Posts

ಬಿಜೆಪಿ ಟಿಕೆಟ್ ಬಿಡುಗಡೆ: ಉತ್ತರ ಕನ್ನಡ ಜಿಲ್ಲೆಯ ಐವರು ಹಾಲಿ ಶಾಸಕರಿಗೆ ಮಣೆ!

ಹೊಸದಿಗಂತ ವರದಿ, ಅಂಕೋಲಾ:

ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು ಬಿಜೆಪಿಯ 5 ಜನ ಹಾಲಿ ಶಾಸಕರೂ ತಮ್ಮ ಕ್ಷೇತ್ರಗಳಲ್ಲಿ ಟಿಕೆಟ್ ಪಡೆದುಕೊಂಡಿದ್ದಾರೆ.

ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ರೂಪಾಲಿ ನಾಯ್ಕ, ಕುಮಟಾ ಹೊನ್ನಾವರ ಕ್ಷೇತ್ರದಲ್ಲಿ ದಿನಕರ ಶೆಟ್ಟಿ, ಭಟ್ಕಳ ಕ್ಷೇತ್ರದಲ್ಲಿ ಸುನೀಲ ನಾಯ್ಕ, ಶಿರಸಿ ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ ಹೆಬ್ಬಾರ್ ಬಿಜೆಪಿ ಟಿಕೆಟ್ ಪಡೆಯುವ ಮೂಲಕ ಇಷ್ಟು ದಿನಗಳಿಂದ ಕೇಳಿ ಬರುತ್ತಿದ್ದ ನಾನಾ ರೀತಿಯ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.

ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಸುನೀಲ ಹೆಗಡೆ ಬಿಜೆಪಿ ಟಿಕೆಟ್ ಪಡೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!