ಅರುಣ್​ ಗೋವಿಲ್​ ಗೆ ಬಿಜೆಪಿ ಟಿಕೆಟ್: ಈ ಕುರಿತು ‘ರಾಮಾಯಣದ ರಾಮನ’ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್​ ಗೋವಿಲ್​ (Arun Govil) ಅವರು ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಉತ್ತರ ಪ್ರದೇಶದ ಮೀರತ್​ ಲೋಕಸಭಾ ಕ್ಷೇತ್ರದಿಂದ ಅರುಣ್​ ಗೋವಿಲ್​ ಅವರು ಸ್ಪರ್ಧಿಸಲಿದ್ದಾರೆ.

ಇತ್ತ ಟಿಕೆಟ್​ ಸಿಕ್ಕಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ತಮಗೆ ಈ ಅವಕಾಶ ನೀಡಿರುವುದಕ್ಕೆ ಅರುಣ್​ ಗೋವಿಲ್​ ಅವರು ಬಿಜೆಪಿ (BJP) ಹಾಗೂ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

‘ಆಯ್ಕೆ ಸಮಿತಿ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಮೀರತ್​ ಕ್ಷೇತ್ರದಿಂದ ನನ್ನನ್ನು ಸಂಸದ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಭಾರತೀಯ ಜನತಾ ಪಕ್ಷ ಮತ್ತು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ. ಜೈ ಶ್ರೀರಾಮ್​’ ಎಂದು ಅರುಣ್​ ಗೋವಿಲ್​ ಅವರು ಪೋಸ್ಟ್​ ಮಾಡಿದ್ದಾರೆ.

72 ವರ್ಷ ಪ್ರಾಯದ ಅರುಣ್​ ಗೋವಿಲ್​ ಅವರು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಸ್ವಕ್ಷೇತ್ರವಾದ ಮೀರತ್​ನಲ್ಲೇ ಅವರಿಗೆ ಟಿಕೆಟ್​ ಸಿಕ್ಕಿದೆ. ಸಿನಿಮಾ ಮಂದಿ ರಾಜಕೀಯಕ್ಕೆ ಕಾಲಿಡುವುದು ಹೊಸದೇನೂ ಅಲ್ಲ. ಈ ಬಾರಿ ಕಂಗನಾ ರಣಾವತ್, ಅರುಣ್​ ಗೋವಿಲ್ ಸೇರಿದಂತೆ ಒಂದಷ್ಟು ಮಂದಿ ಸೆಲೆಬ್ರಿಟಿಗಳು ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯುತ್ತಿದ್ದಾರೆ. ಕಂಗನಾ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಟಿಕೆಟ್​ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!